ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಶಾಸಕ ಯಶವಂತರಾಯಗೌಡ ಪಾಟೀಲ

ಬಿಜಾಪುರ : ಜಿಲ್ಲೆಯ ಇಂಡಿ ತಾಲ್ಲೂಕಿನ ಬೆಳ್ಳುಳ್ಳಿ ಗ್ರಾಮದಲ್ಲಿ ನಿನ್ನೆ ನಡೆದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ಮಾಜಿ ಶಾಸಕರಾದ ರಾಜು ಆಲೂಗೂರ ಅಲ್ಲದೇ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವಜನರಿಗೆ ಇದೊಂದು ದೊಡ್ಡ ಅವಕಾಶವನ್ನು ಪರಿಷತ್ ಒದಗಿಸಲು ಮುಂದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನೋಂದಣಿ ಆಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ.

ನೋಂದಣಿ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

registration

ಈ ಲಿಂಕನ್ನು ಓಪನ್ ಮಾಡಿ online ರೆಸಿಸ್ಟಂರೇಷನ್ ಮಾಡಿಕೊಳ್ಳಿ…

ಪೋಸ್ಟರ್ ಬಿಡುಗಡೆ ವೇಳೆ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಭಾರತಿ ಹೊಸಮನಿ, ಎಂ ಆರ್ ಪಾಟೀಲ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published.

Back to Top