ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ : ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ

ಚಿತ್ರದುರ್ಗ, ಮೇ. 02 : ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಪ್ರಪ್ರಥಮ ಬಾರಿಗೆ ನಾಡಿನ ವಿಧ್ಯಾರ್ಥಿ ಯುವಜನರಿಗಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಚಿತ್ರದುರ್ಗ ಮಾದಾರ ಚನ್ನಯ್ಯ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಅವರ ಅಮೃತ ಹಸ್ತದಿಂದ ಬಿಡುಗಡೆ ಮಾಡಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶ್ರೀಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳ ಪ್ರಚಾರ ಮತ್ತು ಪ್ರಸಾರಕ್ಕಾಗಿ ಇಂತಹ ಹೊಸ ಪ್ರಯತ್ನ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಆಗಿದೆ. ದಲಿತ ವಿದ್ಯಾರ್ಥಿ ಪರಿಷತ್ ನ ಈ ಕಾರ್ಯಕ್ಕೆ ಶುಭವಾಗಲಿ, ಒಳ್ಳೆಯ ಕೆಲಸ ತುಂಬು ಹೃದಯದಿಂದ ನಿಮ್ಮ ಕೆಲಸ ಕಾರ್ಯ ಸಾಕಾರವಾಗಲಿ ಮತ್ತು ಯಶಸ್ವಿಯಾಗಲಿ. ನಮ್ಮ ಆಶೀರ್ವಾದ ಇದೆ. ಹಾಗೆಯೇ ಪರೀಕ್ಷಾ ದಿನದಂದು ಪರೀಕ್ಷಾ ಸ್ಥಳಕ್ಕೆ ಭೇಟಿ ನೀಡುವೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ, ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಸಂಚಾಲಕರಾದ ಶಾಂತಕುಮಾರ್ ಹಾಗೂ‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರ್ಷವರ್ಧನ ಹಾಗೂ ಅಸಂಘಟಿತ ಕಾರ್ಮಿಕರ ರಾಜ್ಯ ಕಾರ್ಯದರ್ಶಿ ಸಂದೀಪ್ ಯುವ ಮುಖಂಡ ಜಯಪ್ರಕಾಶ್ ಹಾಜರಿದ್ದರು.

4 thoughts on “ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ : ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ

Leave a Reply

Your email address will not be published.

Back to Top