ಡಾ.ಬಿ.ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಬಿಡುಗಡೆ

DVP : ಇಂದು ದಲಿತ ವಿದ್ಯಾರ್ಥಿ ಪರಿಷತ್ ನ ಕಛೇರಿಯಲ್ಲಿ ಉರಿಲಿಂಗ ಪೆದ್ದಿಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಛಲವಾದಿ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವನಾಗಿದೇವ ಸ್ವಾಮೀಜಿ ಅವರ ನೇತೃತ್ವದಲ್ಲಿ ಈ ವರ್ಷದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು, ಕಳೆದ ವರ್ಷ ಯಶಸ್ವಿಯಾಗಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಬೆಂಬಲ ನೀಡಿದಂತೆ ಈ ಬಾರಿಯೂ ನಾಡಿನ ಎಲ್ಲಾ ವಿದ್ಯಾರ್ಥಿ, ಯುವಜನರು ಪರೀಕ್ಷೆ ಬರೆಯುವ ಜೊತೆಗೆ ಪರೀಕ್ಷೆಯನ್ನು ಬೆಂಬಲಿಸಿ, ಈ ಒಂದು ವಿಶೇಷವಾದ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸೋಣ ಎಂದರು.

ಶೀಘ್ರವೇ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಕಳೆದ ಬಾರಿ ಸಹಕಾರ ನೀಡಿದಂತೆ ಈ ಬಾರಿಯೂ ನಿಮ್ಮೆಲ್ಲರ ಸಹಕಾರ ಇರಲಿ.

5 thoughts on “ಡಾ.ಬಿ.ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಬಿಡುಗಡೆ

Leave a Reply

Your email address will not be published.

Back to Top