ಅಂಬೇಡ್ಕರ್ ಕುರಿತು ಡಿವಿಪಿ ಸ್ಪರ್ಧಾ ಪರೀಕ್ಷೆ; ಒಟ್ಟು 20 ಲಕ್ಷ ಬಹುಮಾನ

DVP News : ಡಾ. ಬಿ ಆರ್‌ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಉತ್ತಮ ರಿತಿಯಲ್ಲಿ ಪರೀಕ್ಷೆ ಬರೆದವರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ರಾಜ್ಯ ಸಂಚಾಲಕ ಬಾಲಾಜಿ ಎಂ ಕಾಂಬಳೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಮೊದಲ ಮೂವರು ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. ಪ್ರಥಮ ಬಹುಮಾನ 5 ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 2.5 ಲಕ್ಷ ರೂಪಾಯಿ, ತೃತೀಯ ಬಹುಮಾನ 1 ಲಕ್ಷ ರೂಪಾಯಿ ಇರಲಿದೆ” ಎಂದು ತಿಳಿಸಿದರು.

“ಅಷ್ಟೇ ಅಲ್ಲದೆ ಈ ಬಾರಿ ಜಿಲ್ಲಾ ಮಟ್ಟದಲ್ಲಿಯೂ 3 ಜನ ರ‍್ಯಾಂಕ್ ವಿಜೇತರನ್ನು ಆಯ್ಕೆ ಮಾಡಿ ಬಹುಮಾನ ನೀಡಲು ನಿರ್ಧರಿಸಲಾಗಿದೆ. ಪ್ರಥಮ ಬಹುಮಾನ 15 ಸಾವಿರ ರೂಪಾಯಿ, ದ್ವಿತೀಯ ಬಹುಮಾನ 10 ಸಾವಿರ ರೂಪಾಯಿ, ತೃತೀಯ ಬಹುಮಾನ 5 ಸಾವಿರ ರೂಪಾಯಿ ಇರಲಿದೆ” ಎಂದು ಹೇಳಿದರು.

“ಪರೀಕ್ಷೆಗೆ ಜನವರಿ 7ರಿಂದ ನೋಂದಣಿ ಆರಂಭಿಸಲಾಗಿದ್ದು, ಫೆಬ್ರುವರಿ 28ರಂದು ಕೊನೆಯ ದಿನಾಂಕವಾಗಿರುತ್ತದೆ. 15ರಿಂದ 35 ವರ್ಷ ವಯೋಮಾನದ ವಿದ್ಯಾರ್ಥಿಗಳು, ಯುವಜನರು ವೆಬ್‌ ಸೈಟ್ https://thedvp.org/registration/- ‌ಭೇಟಿ ನೀಡಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9380678859 ಅನ್ನು ಸಂಪರ್ಕಿಸಬಹುದು” ಎಂದು ಅವರು ಮಾಹಿತಿ ನೀಡಿದ್ದಾರೆ.

ನಾಡಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಯುವಜನರಿಗೆ ಅವಕಾಶ ಇರಲಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ಪ್ರಶ್ನೆಗಳನ್ನೊಳಗೊಂಡ ಸ್ಪರ್ಧಾ ಪರೀಕ್ಷೆ ನಡೆಸುವ ಮೂಲಕ ದಲಿತ ವಿಧ್ಯಾರ್ಥಿ ಪರಿಷತ್ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ ಎಂದು ಅವರು ಹೇಳಿದರು.

ಕಳೆದ ಬಾರಿ ಈ ವಿನೂತನ ಪರೀಕ್ಷೆಯನ್ನು ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗಿದೆ. ಈಗಾಗಲೇ ಹೋದ ವರ್ಷ ನಡೆದ ಪರೀಕ್ಷೆ ಬಿಡುಗಡೆ ಮಾಡಲಾಗಿದ್ದು, ವಿಜೇತರಿಗೆ ಇದೇ ತಿಂಗಳ 31 ರಂದು ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಸನ್ಮಾನಿಸಲಾಗುತ್ತಿದೆ. ಬಹುಮಾನ ವಿಜೇತರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಬ್‌ ಸೈಟ್ www.thedvp.org ಗೆ ಭೇಟಿ ನೀಡಬಹುದು ಎಂದು ಬಾಲಾಜಿ ಎಂ ಕಾಂಬಳೆ ಹೇಳಿದ್ದಾರೆ.

2 thoughts on “ಅಂಬೇಡ್ಕರ್ ಕುರಿತು ಡಿವಿಪಿ ಸ್ಪರ್ಧಾ ಪರೀಕ್ಷೆ; ಒಟ್ಟು 20 ಲಕ್ಷ ಬಹುಮಾನ

Leave a Reply

Your email address will not be published.

Back to Top