ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

DVP : ವಿಜಯಪುರ ನಗರದಲ್ಲಿ ಬರುವ ಇಂದಿರಾ ವಸತಿ ನರ್ಸಿಂಗ್ ವಸತಿ ನಿಲಯ ತೆಗಡೆಗಲ್ಲಿ ನಗರದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದೆ ಮುಂದೆ ಪ್ರತಿಭಟನೆ ನಡೆಸಿದರು.

ವಸತಿ ನಿಲಯ ಪಾಲಕರು ಅಡುಗೆ ಸಹಾಯಕರ ಬೇಜವಾಬ್ದಾರಿಯನ್ನು ಖಂಡಿಸಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಜಯಪುರ ಮುಂದೆ ಪ್ರತಿಭಟನೆ .

ಹಾಸ್ಟೆಲ್ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಈ ಹೋರಾಟಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಮೂಲಕ ಬೆಂಬಲ ಸೂಚಿಸಿ ಅಧಿಕಾರಿಗಳಿಗೆ ವಿಧ್ಯಾರ್ಥಿಗಳ ಸಮಸ್ಯೆ ಬಗ್ಗೆ ಮಾಹಿತಿ ನೀಡಲಾಯಿತು.

ವಿಧ್ಯಾರ್ಥಿಗಳ ಸಮಸ್ಯೆ ದೇವರಾಜ್ ಅರಸು ಕಲ್ಯಾಣ ಇಲಾಖೆ ಅಧಿಕಾರಿಗಳು ಜಿಲ್ಲಾ ಅಧಿಕಾರಿಗಳು ಮತ್ತು ತಾಲೂಕು ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಂದು ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದರು.

ಈ ವೇಳೆ ಪರಿಷತ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಆನಂದ ಮುದುರ ಹಾಗೂ ನಗರ ಘಟಕದ ಅಧ್ಯಕ್ಷ ಸುರೇಶ್ ರಾಠೋಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

One thought on “ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

Leave a Reply

Your email address will not be published.

Back to Top